481 "ನಿನಗೆ ವಿರೋಧವಾಗಿ ನಿಂತು ಮುಯ್ಯಿ ತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದಿ" ಕೀರ್ತನೆಗಳು 8:02
482 "ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ, ಅದು ನಮ್ಮ ದೇವರ ಸ್ತೋತ್ರವೇ" ಕೀರ್ತನೆಗಳು 40
483 "ಬಾಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು" ಜ್ಞಾನೋಕ್ತಿಗಳು 12:04
483 "ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವ ಸ್ವಭಾವದಲ್ಲಿ ಪಾಲನ್ನು ಹೊಂದುವವರಾಗ ಬೇಕೆಂಬ ಉದ್ಧೇಶದಿಂದ ದೇವರು ತನ್ನ ಪ್ರಭಾವತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ" 2ಪೇತ್ರ 1:04
484 "ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ" ಗಲಾತ್ಯದವರಿಗೆ 3:29
485 "ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು ಅವನು ಪರಿಶೋಧಿತನಾದಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು" ಯಾಕೋಬ 1:12
486 "ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ, ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ" ಇಬ್ರಿಯರಿಗೆ 4:01
487 "ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಪ್ರಯೋಜನವಾಗಿದೆ ಭಕ್ತಿಯಾದರೋ ಎಲ್ಲಾ ವಿಧಗಳಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವ ವಾಗ್ದಾನವುಂಟು" 1 ತಿಮೋಥೆ 4:8
488 "ದೇವರು ಲೌಕೀಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವಯ್ರ್ವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇಮಿಸಲಿಲ್ಲವೋ" ಯಾಕೋಬ 2:05
489 "ಯೇಸುಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮ ದಾನವನ್ನು ಹೊಂದುವಿರಿ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ" ಅಪೊಸ್ತಲರಕೃತ್ಯಗಳು 2
490 "ನಿಶ್ಚಯವಾಗಿ ದೇವರ ವಾಗ್ದಾನಗಳು ಎಷ್ಟಿದ್ದರೂ ಕ್ರಿಸ್ತನಲ್ಲಿ ದೃಢವಾಗುತ್ತವೆ, ಆದಕಾರಣ ದೇವರ ಪ್ರಭಾವವು ಪ್ರಕಾಶವಾಗುವುದಕ್ಕೋಸ್ಕರ ಆತನ ಮೂಲಕವಾಗಿ ನಾವು ಆಮೆನ್ ಎಂದು ಹೇಳುತ್ತೇವೆ" 2ಕೊರಿಂಥದವರಿಗೆ 1:20
491 "ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶ ಮಂಡಲವನ್ನು ಎದುರು ನೋಡುತ್ತಾ ಇದ್ದೇವೆ" 2 ಪೇತ್ರ 3:13
492 ಮನುಷ್ಯರು ಆಹಾರ ಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೋದು ಮಾತಿನಿಂದಲೂ ಬದುಕುತ್ತಾರೆ" ಧರ್ಮೋಪದೇಶಕಾಂಡ 8:03
492 "ಕರ್ತನೇ, ಯೆಹೋವನೇ, ನನ್ನ ಸೇವಕರಿಗೆ ಶ್ರೇಷ್ಟ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ; ನಿನ್ನ ವಾಕ್ಯವು ಸತ್ಯವದದ್ದು" 2 ಸಮುವೇಲ 7:28
493 "ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ" ಕೀರ್ತನೆಗಳು 16:08
494 "ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ, ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ" ಕೀರ್ತನೆಗಳು 16:11
495 " ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು" ಮತ್ತಾಯ 22:44
496 "ಯೇಸು ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ" ರೋಮಪುರದವರಿಗೆ 8:34
497 'ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ ಪರಲೋಕದೊಳಗೆ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿ ಕೊಂಡನು" ಎಫೆಸದವರಿಗೆ 1:20,21
498 "ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದರಿಂದ ಮೇಲಿನವುಗಳನ್ನೇ ಹುಡುಕಿರಿ ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ" ಕೊಲೊಸ್ಸೆಯವರಿಗೆ 3:01
499 "ಈ ಯಾಜಕನು ಪಾಪ ನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು" ಇಬ್ರಿಯರಿಗೆ 10:12
500 "ಆತನು ಅವರಿಗೆ ನೀವು ದೋಣ ಯ ಬಲಗಡೆಯಲ್ಲಿ ಬಲೆ ಬೀಸಿದರೆ ಸಿಕ್ಕುವುದು ಎಂದು ಹೇಳಿದನು ಅವರು ಹಾಗೆ ಬೀಸಿದಾಗ ಮೀನುಗಳು ಬಹಳ ಹೆಚ್ಚಾಗಿ ಸಿಕ್ಕಿದ್ದರಿಂದ ಬಲೆಯನ್ನು ಎಳೆಯುವುದಕ್ಕೆ ಆಗದೆ ಹೋಯಿತು" ಯೋಹಾನ 21:06