702 " ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ" ರೋಮಾಪುರದವರಿಗೆ 8:28
703 "ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ" ರೋಮಾಪುರದವರಿಗೆ 8:26
704 "ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ ?" ರೋಮಪುರದವರಿಗೆ 8:32
705 ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ ಅಪರಾಧಿಗಳೆಂದು ನಿರ್ಣಯಿಸುವವರು ಯಾರು ?" ರೋಮಾಪುರದವರಿಗೆ 8:33
706 "ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಶಯಗಳಲ್ಲಿ ಜಯಶಾಲಿಗಳಾಗುತ್ತೇವೆ" ರೋಮಾಪುರದವರಿಗೆ 8:37
707 "ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ" ಕೀರ್ತನೆಗಳು 91:03
708 " ನಿನ್ನ ಬಲಗಡೆಯಲ್ಲಿ ಹತ್ತುಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು" ಕೀರ್ತನೆಗಳು 91:07
709 "ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು" ಕೀರ್ತನೆಗಳು 91:14
710 "ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು" ಕೀರ್ತನೆಗಳು 91:15
711 "ಆತನೇ ನನ್ನ ಬಂಡೆಯು ಆತನು ನಿರ್ವಂಚಕನು" ಕೀರ್ತನೆಗಳು 92:15
712 "ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ" ಕೀರ್ತನೆಗಳು 94:19
713 "ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು" ಕೀರ್ತನೆಗಳು 100:05
714 "ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ತಿಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರಿಗಿ ಬರಮಾಡುತ್ತಾನೆ" ಕೀರ್ತನೆಗಳು 103:05
715 "ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ" ಕೀರ್ತನೆಗಳು 103:13
716 "ಅನುದಿನವೂ ನಮ್ಮ ಭಾರವನ್ನು ಹೊರುವ ಕರ್ತನಿಗೆ ಸ್ತೋತ್ರವಾಗಲಿ ನಮ್ಮನ್ನು ರಕ್ಷಿಸುವ ದೇವರು ಆತನೇ" ಕೀರ್ತನೆಗಳು 68:19,20
717 "ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ ನಿನ್ನ ರಕ್ಷಣೆಯು ಭದ್ರ ಸ್ಥಳದಲ್ಲಿರಿಸುವುದು" ಕೀರ್ತನೆಗಳು 69:29
718 "ಯೆಹೋವನು ಬಡವರ ಮೊರೆಗೆ ಲಕ್ಷ್ಯ ಕೊಡುವನು" ಕೀರ್ತನೆಗಳು 69:33
719 "ಯೆಹೋವನು ನನಗೆ ಇದ್ದಾನೆ ಆತನೇ ನನಗೆ ಸಹಾಯಕನು ಕೀರ್ತನೆಗಳು 118:07
720 "ಯೆಹೋವನಿಗೆ ಕೃತಜ್ಞತಾ ಸ್ತುತಿ ಮಾಡಿರಿ ಆತನು ಒಳ್ಳೆಯವನು" ಕೀರ್ತನೆಗಳು 118:01