761 " ಚಿಂತೆ ಮಾಡ ಬೇಡಿರಿ, ಯಾಕಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು " ಲೂಕ 12:12
762 "ಚಿಕ್ಕ ಹಿಂಡೇ ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ" ಲೂಕ 12:32
763 "ಯಾರು ಆತನನ್ನು ಅಂಗೀಕರಿಸಿದರೋ ಅಂದರೆ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು" ಯೋಹಾನ 1:12
764 "ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನುಂಟು ಮಾಡುವುದು" ಯೋಹಾನ 4:14
765 "ದೇವರು ಆತ್ಮ ಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಅರಾಧಿಸಬೇಕು" ಯೋಹಾನ 4:24
766 "ನನ್ನ ವಾಕ್ಯಗಳನ್ನು ಕೇಳಿ ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ" ಯೋಹಾನ 5:24
767 "ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು" ಯೋಹಾನ 5:25
768 "ಒಳ್ಳೇದನ್ನು ಮಾಡಿದವರಿಗೆ ಜೀವಕ್ಕಾಗಿ ಪುನರುತ್ಥಾನವಗುವುದು; ಕೆಟ್ಟದ್ದನ್ನು ನಡಿಸಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು" ಯೋಹಾನ 5:29
769 "ಕೆಟ್ಟು ಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಅಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಅತನನ್ನು ನೇಮಿಸಿ ಮುದ್ರೆ ಹಾಕಿದ್ದಾನೆ" ಯೋಹಾನ 6:27
770 "ಜೀವ ಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ" ಯೋಹಾನ 6:35
771 "ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವುದೇ ಇಲ್ಲ" ಯೋಹಾನ 6:37
772 "ನನ್ನನ್ನು ಕಳು ಹಿಸಿದಾತನ ಚಿತ್ತವೇನೆಂದರೆ ಆತನು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇ ದಿನದಲ್ಲಿ ಎಬ್ಬಿಸಬೇಕೇಂಬುದೇ" ಯೋಹಾನ 6:39
773 "ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ ನಿತ್ಯಜೀವವು ಸಿಕ್ಕಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ" ಯೋಹಾನ 6:40
774 "ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು" ಯೋಹಾನ 6:44
775 "ಪರಲೋಕದಿಂದ ಇಳಿದು ಬರುವ ಜೀವವುಳ್ಳ ರೊಟ್ಟಿಯು ನಾನೆ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು" ಯೋಹಾನ 6:51
776 "ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು" ಯೋಹಾನ 7:38
777 "ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೇಳಕನ್ನು ಹೊಂದಿದವನಾಗುವನು" ಯೋಹಾನ 8:12
778 "ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ ಆತನು ನನ್ನನ್ನು ಒಂಟಿಗನಾಗಿ ಬಿಡಲಿಲ್ಲ" ಯೋಹಾನ 8:29
779 "ಸತ್ಯವನ್ನು ತಿಳಿದುಕೊಳ್ಳುವಿರಿ; ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು" ಯೋಹಾನ 8:32
780 "ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವುದು" ಯೋಹಾನ 8:36