781 "ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು" ಯೋಹಾನ 10:10
782 "ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ನನ್ನ ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ" ಯೋಹಾನ 10:15
783 "ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ" ಯೋಹಾನ 11:40
784 "ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ" ವಿಮೋಚನಾಕಾಂಡ 20:12
785 "ಭೂಮಿಯಲ್ಲಿರುವ ಎಲ್ಲಾ ಜನಗಳು ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ಭಯಪಡುವರು" ಧರ್ಮೊಪದೇಶಕಾಂ 28:10
786 "ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವುದು" ಧರ್ಮೋಪದೇಶಕಾಂಡ 28:06
787 "ನೀವು ಅನೆಕ ಜನಗಳಿಗೆ ಸಾಲ ಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ" ಧರ್ಮೊಪದೇಶಕಾಂಡ 28:12
788 "ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವುದು" ಯೋಹಾನ 15:07
789 "ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು" ಯೋಹಾನ :15:14,15
790 "ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು" ಯೋಹಾನ 15:16
791 "ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು" ಯೋಹಾನ 14:12
792 "ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನೆರವೇರಿಸುವೆನು" ಯೋಹಾನ 14:13
793 "ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವುದಕ್ಕೆ ಕೊಡುವನು ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ" ಯೋಹಾನ 14:16
794 "ನಾನು ನಿಮ್ಮನ್ನು ಅನಾಥರಾಗಿ ಬಿಡುವುದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ" ಯೋಹಾನ 14:18
795 "ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣ ಸಿಕೊಳ್ಳುವೆನು" ಯೋಹಾನ 14:21
796 "ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನೆಪಿಗೆ ತರುವನು" ಯೋಹಾನ 14:26
797 "ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆನ್ನುವುದಿಲ್ಲ; ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ" ಯೋಹಾನ 15:15,16
798 "ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು" ಯೋಹಾನ 16:13
799 "ನಿಮಗೆ ನಿಜ ನಿಜವಾಗಿ ಹೇಳುತ್ತೇನೆ ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು" ಯೋಹಾನ 16:23
800 "ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಯೋಹಾನ 16:33