801 "ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸುವನ್ನು ತಿಳಿಯುವುದೇ ನಿತ್ಯಜೀವವು" ಯೋಹಾನ 17:03
802 "ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾದೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು" ರೋಮಾಪುರದವರಿಗೆ 8:17
803 "ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು" ರೋಮಾಪುರದವರಿಗೆ 12:21
804 "ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೊ ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವುದು" ರೋಮಾಪುರದವರಿಗೆ 13:03
805 "ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವುದೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ" ಎಫೆಸದವರಿಗೆ 1:14
806 "ದೇವರಿಗೆ ಒಳಗಾಗಿರಿ, ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು" ಯಾಕೋಬನು 4:07
807 "ದೇವರ ಸಮೀಪಕ್ಕೆ ಬನ್ನಿರಿ ಆಗ ಆತನು ನಿಮ್ಮ ಸಮೀಪಕ್ಕೆ ಬರುವನು" ಯಾಕೋಬನು 4:08
808 "ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು" ಯಾಕೋಬನು 4:10
809 "ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ" ಯಾಕೋಬನು 4:06
810 "ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾ ವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣ ಸಿರಿ" ಯಾಕೋಬನು 1:2,3
811 "ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೋಳ್ಳಲಿ, ಅದು ಅವನಿಗೆ ದೊರಕುವದು" ಯಾಕೋಬನು 1:05
812 "ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದಮೇಲೆ ಜೀವವೆಂಬ ಜಯಮಾಲೆಯನ್ನು ಹೋದುವನು" ಯಾಕೋಬನು 1:12
813 " ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣ ಂದ ಸಕಲ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ" ಯಾಕೋಬನು 1:17
814 "ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮಥ್ರ್ಯವುಳ್ಳದ್ದಾಗಿದೆ" ಯಾಕೋಬನು 1:21
815 "ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣ ಸಲ್ಪಟ್ಟಿತು" ಯಾಕೋಬ 2:23
816 "ಆದರೆ ಮೇಲಣ ಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ" ಯಾಕೋಬ 3:17
817 "ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು" ಯಾಕೋಬ 5:15
818 "ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ " ಯಾಕೋಬನು 5:16
819 "ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವುದಕ್ಕೆ ಸಿದ್ದವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ" 1ಪೇತ್ರನು 1:05
820 "ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋದಿತವಾಗಿ ಯೇಸುಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟು ಮಾಡುವುದು" 1ಪೇತ್ರ 1:07