841 "ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ" 1ಯೋಹಾನ 4:04
842 "ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ" ಧರ್ಮೋಪದೇಶಕಾಂಡ 31:08
843 "ನೀವು ಅನೇಕ ಜನಗಳಿಗೆ ಸಾಲ ಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ" ಧರ್ಮೋಪದೇಶಕಾಂಡ 28:12
844 "ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ" ಯೆಹೋಶುವ 1:09
845 "ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು, ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು" ಜ್ಞಾನೋಕ್ತಿಗಳು 3:02
846 "ಯೆಹೋವನು ನನಗೆ ಅಲೋಚನೆಯನ್ನು ಹೇಳಿಕೊಡುತ್ತಾನೆ; ಆತನನ್ನು ಕೊಂಡಾಡುವೆನು" ಕೀರ್ತನೆಗಳು 16:07
847 "ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾ ಸೌಖ್ಯದಿಂದ ಆನಂದಿಸುವರು" ಕೀರ್ತನೆಗಳು 37;11
848 "ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ" ಕೀರ್ತನೆಗಳು 37:39
849 "ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ" ಕೀರ್ತನೆಗಳು 48:14
850 "ನಾನು ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲ ಕೊಡುವನು" ಯೋಹಾನ 15:05
851 "ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ; ನಂಬಿದರೆ ನೀವು ಬೆಳಕಿನವರಾಗುವಿರಿ" ಯೋಹಾನ 12:36
852 "ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನೆ" ಯೋಹಾನ 12:47
853 "ನಾನೇ ಆ ಬಾಗಿಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು" ಯೋಹಾನ 10:9
854 "ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ" ಯೋಹಾನ 10:15
855 "ಕೃಪೆಯೂ ಸತ್ಯವೂ ಯೇಸುಕ್ರಿಸ್ತನ ಮುಖಾಂತರ ಬಂದವು ನಾವೆಲ್ಲರೂ ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು" ಯೋಹಾನ 1:16
856 "ಅಗೋ ಯಜ್ಞಕ್ಕೆ ದೇವರು ನೇಮಿಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವನು" ಯೋಹಾನ 1:29
857 "ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು" ಯೋಹಾನ 3:16
858 "ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು" ಯೋಹಾನ 3:35,36
859 "ಈ ನೀರನ್ನು ಕುಡಿದವರಿಗೆ ತಿರುಗಿ ನೀರಡಿಕೆಯಾಗುವುದು; ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ" ಯೋಹಾನ 4:13,14
860 "ಜೀವ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದ ಭರಿತನಾಗ ಮಾಡುವಿ" ಅಪೋಸ್ತಲಕೃತ್ಯಗಳು 2:28