861 "ನಿಮ್ಮ ಪಾಪಗಳು ಪರಿಹಾರವಾಗುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನ ಹೊಂದುವಿರಿ" ಅಪೋಸ್ತಲಕೃತ್ಯಗಳು 2:38
862 "ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ" ಅಪೊಸ್ತಲರ ಕೃತ್ಯಗಳು 4:12
863 "ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿದವರಿಗೆ ಆಹಾರಕೊಡುವವನೂ ಆತನೇ" ಕೀರ್ತನೆಗಳು 146:07
864 "ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ, ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ" ಕೀರ್ತನೆಗಳು 146:8,9
865 "ಆತನು ಅನಾಥರಿಗೂ ವಿಧವೆಯರಿಗೂ ಅಧಾರವಾಗಿದ್ದಾನೆ, ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ" ಕೀರ್ತನೆಗಳು 146:09
866 "ಇಸ್ರಾಯೇಲಿನ ಸದಮಲ ಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ" ಯೆಶಾಯ 54:05
867 "ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು" ಯೆಶಾಯ 54:07
868 "ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣ ಸುವೆನು" ಯೆಶಾಯ 54:08
869 "ನನ್ನ ಕೃಪೆಯು ನಿನ್ನನ್ನು ಬಿಟ್ಟು ಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣ ಸುವ ಯೆಹೋವನು ಅನ್ನುತ್ತಾನೆ" ಯೆಶಾಯ 54:10
870 "ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು" ಯೆಶಾಯ 54:13
871 "ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು" ಯೆಶಾಯ 54:17
872 "ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ" ಯೆಶಾಯ 57:15
873 "ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು" ಯೆಶಾಯ 57:18
874 "ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು" ಯೆಶಾಯ 118
875 "ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು" ಯೆಶಾಯ 60:20
876 "ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು; ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು" ಯೆಶಾಯ 60:22
877 "ನಿಮಗಾದ ಅವಮಾನಕ್ಕೆ ಬದಲಾಗಿ ಎರೆಡರಷ್ಟು ಮಾನವನ್ನು ಹೊಂದುವಿರಿ" ಯೆಶಾಯ 61:07
878 "ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ" ಕೀರ್ತನೆಗಳು 121:05
879 "ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು" ಕೀರ್ತನೆಗಳು 121:07
880 "ನಿಮ್ಮನ್ನು ತಾಕುವವನು ಯೆಹೋವನ ಕಣು ್ಣಗುಡ್ಡನ್ನು ತಾಕುವವನಾಗಿದ್ದಾನೆ" ಜೆಕರ್ಯ 2:08