81"ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು" ಜ್ಞಾನೋಕ್ತಿಗಳು 5:02
82"ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳುವಳಿಕೆಯನ್ನು ಹೊಂದಿದ್ದೇನೆ " ಜ್ಞಾನೋಕ್ತಿಗಳು 8:12
83"ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಪರಿಶುದ್ಧನ ತಿಳುವಳಿಕೆಯೇ ವಿವೇಕವು" ಜ್ಞಾನೋಕ್ತಿಗಳು 9:10
84"ನಮ್ಮ ಕರ್ತನು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ; ಆತನ ಜ್ಞಾನವು ಅಪರಿಮಿತವಾಗಿದೆ" ಕೀರ್ತನೆಗಳು 147:05
86"ದೇವರು ತಾನು ಮೆಚ್ಚಿದವರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೇ" ಪ್ರಸಂಗಿ 2:26
87"ಆ ಅಂಕುರದ ಮೇಲೆ ಜ್ಞಾನ, ವಿವೇಕದಾಯಕ ಆತ್ಮ; ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಕರ್ತನ ಭಯವನ್ನೂ ಉಂಟುಮಾಡುವ ಆತ್ಮ, ಅಂತೂ ಕರ್ತನ ಆತ್ಮವೇ ನೆಲೆಗೊಂಡಿರುವದು" ಯೆಶಾಯ 11:02
88"ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಕರ್ತನ ಜ್ಞಾನವು ತುಂಬಿಕೊಂಡಿರುವದು" ಯೆಶಾಯ 11:09
89"ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು" 2 ಕೊರಿಂಥದವರಿಗೆ
90"ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು" ಆದಿಕಾಂಡ 33:11
91"ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ; ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ" ಯೆಶಾಯ 49:08
92"ಇದಲ್ಲದೆ ಪ್ರತಿಯೊಬ್ಬನು ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ" ಪ್ರಸಂಗಿ 3:13
93"ಆತನು ಯಾವನಿಗೆ ಆಸ್ತಿ ಪಾಸ್ತಿಗಳನ್ನು ದಯಪಾಲಿಸುವುದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದಿದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ" ಪ್ರಸಂಗಿ 5:19
94"ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು, ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ" ರೋಮಾಪುರದವರಿಗೆ 15:05
95"ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಹೇಳುವವನಾಗಿದ್ದೇನೆ" ಅಪೊಸ್ತಲರ ಕೃತ್ಯಗಳು 26:22
96"ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೊಡಿ- ಕರ್ತನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ" ಕೀರ್ತನೆಗಳು 86:17
97"ನಿನ್ನ ಸೇವಕನಾದ ನನ್ನ ಮೇಲೆ ದಯವಿಡು; ಆಗ ಜೀವದಿಂದ್ದು ನಿನ್ನ ವಾಕ್ಯವನ್ನು ಕೈಕೊಳ್ಳುವೆನು" ಕೀರ್ತನೆಗಳು 119:17
98"ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾ ಸಂದರ್ಭವು ನನಗುಂಟು, ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ " 1 ಕೊರಿಂಥದವರಿಗೆ 16:9
99"ಸತ್ಯಾಭಿವೃದ್ಧಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ" 2 ಕೊರಿಂಥದವರಿಗೆ 13:8
100 "ದೇವರೇ ನಿನ್ನ ಸಂಕಲ್ಪಗಳು ನನ್ನ ಎಣ ಕೆಯಲ್ಲಿ ಎಷ್ಟೋ ಗೌರವವಾಗಿವೆ ಅವುಗಳ ಒಟ್ಟು ಅಸಂಖ್ಯವಾಗಿವೆ" ಕೀರ್ತನೆಗಳು 139:17