981"ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ" (ಕೀರ್ತ 32:11)
982"ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣ ದಾಡುವಂತೆ ಮಾಡಿದಿ" (ಕೀರ್ತ 30:11)
983"ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲ್ಯರು ಹರ್ಷಿಸುವರು" (ಕೀರ್ತ 14:7)
984"ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು. ಆತನಿಂದಾದ ರಕ್ಷಣೆಯ ನಿಮಿತ್ತ ಆನಂದ ಪಡುವೆನು" (ಕೀರ್ತ 35:9)
985"ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ, ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ" (1ಪೂರ್ವ 16:10)
986"ಈ ದಿನವು ನಮ್ಮ ಯೆಹೋವನಿಗೆ ಪ್ರತಿಷ್ಠಿತ ದಿನವಾಗಿರುವುದರಿಂದ ವ್ಯಸನ ಪಡಬೇಡಿರಿ. ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ" (ನೆಹೆ 8:10)
987"ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಸ್ರಯಿಸಿಕೊಳ್ಳುವರು, ಸರಳ ಹೃದಯರೆಲ್ಲರೂ ಹಿಗ್ಗುವರು" (ಕೀರ್ತ 64:10)
988"ಯೆಹೋವನನ್ನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ, ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ" (ಕೀರ್ತ 92:4)
989"ನೀತಿವಂತರೇ ಯೆಹೋವನಲ್ಲಿ ಆನಂದಿಸಿರಿ, ಆತನ ಪರಿಶುದ್ಧ ನಾಮವನ್ನು ಕೊಂಡಾಡಿರಿ" (ಕೀರ್ತ 97:12)
990"ಉತ್ಸಾಹಧ್ವನಿಯೂ ಜಯಘೋಷವೂ ನೀತಿವಂತರ ಗುಡಾರದಲ್ಲಿವೆ" (ಕೀರ್ತ 118:15)
991"ನಿನ್ನ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವನು" (ವಿಮೋ 23:25)
992"ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ ಯೆಹೋವನು ಅವನನ್ನು ಉದ್ಧರಿಸುವನು. ಅವನ ರೋಗವನ್ನೆಲ್ಲಾ ಪರಿಹರಿಸಿ ಆರೋಗ್ಯವನ್ನುಂಟು ಮಾಡಿದ್ದೀಯಲ್ಲಾ ಸ್ವಾಮಿ" (ಕೀರ್ತ 41:3)
993"ಚಿಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅಲ್ಲಿಯ ಜನರ ಪಾಪವು ಪರಿಹಾರವಾಗುವದು (ಯೆಶಾ 33:24)
994"ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾ ರೋಗಿಗಳನ್ನು ಪಾಶ್ರ್ವವಾಯುವಿನವರನ್ನೂ ಆತನ ಬಳಿಗೆ ಕರೆತಂದರು. ಆತನು ಅವರನ್ನು ಸ್ವಸ್ಥಮಾಡಿದನು" (ಮತ್ತಾ 4:24)
995"ರೋಗಿಗಳನ್ನು ಸ್ವಸ್ಥಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠ ಹತ್ತಿದವರನ್ನು ಶುದ್ಧಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಹೊಂದಿದ್ದೀರಿ ಉಚಿತವಾಗಿ ಕೊಡಿರಿ. (ಮತ್ತಾ 10:8)
996"ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ" (ಯಾಕೋ 5:14)
997"ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ ಕ್ಷೇಮವಿಲ್ಲದವರಿಗೆ ಬೇಕು" (ಮತ್ತಾ 9:12)
998"ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ ಸಮಸ್ತ ರೋಗಗಳನ್ನು ವಾಸಿಮಾಡುವನು" (ಕೀರ್ತ 103:3)
999"ಆತನು ತನ್ನ ದೂತರನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು" (ಕೀರ್ತ 107:20)
1000. "ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟು ಮಾಡುವ ಕಿರಣಗಳುಳ್ಳವನಾಗಿ ಮೂಡುವನು" (ಮಲಾಕಿ 4:2)